[ag_menu menu="top menu"]

SSP scholarship 2025: ಬಿಗ್ ಅಪ್ಡೇಟ್..! ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮುಂದೂಡಲಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Photo of author

[ag_share_buttons]

SSP scholarship 2025: ಬಿಗ್ ಅಪ್ಡೇಟ್..! ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮುಂದೂಡಲಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.


ನಮಸ್ಕಾರ ಕರ್ನಾಟಕದ ಜನತೆಗೆ, SSP ಸ್ಕಾಲರ್ಶಿಪ್ (SSP scholarship 2025) ನಲ್ಲಿ ಒಂದು ಬದಲಾವಣೆ ಕಂಡುಬಂದಿದ್ದು ಈ ವರ್ಷದ SSP ಸ್ಕಾಲರ್ಶಿಪ್ ಕುರಿತಾದ ಮಾಹಿತಿ ಇದು. ಈ ಒಂದು ಲೇಖನದಲ್ಲಿ SSP ಸ್ಕಾಲರ್ಶಿಪ್ ಕುರಿತಾದ ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಹಾಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿ ಸರಿಯಾದ ಮಾಹಿತಿಯನ್ನು ತೆಗೆದುಕೊಳ್ಳಿ. ಇದೇ ರೀತಿಯ ಎಲ್ಲಾ ಉಪಯುಕ್ತ ಮಾಹಿತಿಗಳಿಗಾಗಿ ಇಂದೇ ನಮ್ಮ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ. ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ;

SSP ಸ್ಕಾಲರ್ಶಿಪ್ ಯೋಜನೆಯ ಕುರಿತು.SSP scholarship 2025.

ನಮ್ಮ ರಾಜ್ಯದ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕಾಗಿ ಸಹಾಯಧನ ರೂಪದಲ್ಲಿ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನ (SSP scholarship 2025) ಯೋಜನೆಯನ್ನು ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಹಿಂದುಳಿದ ವರ್ಗ ಹಾಗೂ ಪಂಗಡಗಳ (SC/ST) ಮತ್ತು ಇತರ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಉನ್ನತ ಶಿಕ್ಷಣ ಪಡೆಯಲು ಹಾಗೂ ಅವರ ಶೈಕ್ಷಣಿಕ ಖರ್ಚಿಗೆ ಸಹಾಯವಾಗುವ ಉದ್ದೇಶದಿಂದ ಈ ಒಂದು ಆರ್ಥಿಕ ಸಹಾಯವನ್ನು ನೀಡುತ್ತಾ ಬಂದಿದೆ. ಈ ಒಂದು ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಹಣವನ್ನು ನೀಡುವ ಮೂಲಕ ಅವರನ್ನು ಮುಂದಿನ ಶೈಕ್ಷಣಿಕ ಜೀವನಕ್ಕೆ ಉತ್ತೇಜಿಸಲಾಗುವುದು.

ಅರ್ಜಿ ಸಲ್ಲಿಕೆಯ ವಿಸ್ತರಿಸಿದ ಕೊನೆಯ ದಿನಾಂಕ.Last Date Extended.

ನಿಮಗೆಲ್ಲಾ ತಿಳಿದಿರುವ ಹಾಗೆ ರಾಜ್ಯ ಸರ್ಕಾರವು, ರಾಜ್ಯದ ಎಲ್ಲಾ ಪ್ರತಿಭಾವಂತ ಮಕ್ಕಳಿಗಾಗಿ ಅನುಕೂಲವಾಗುವಂತೆ SSP ಸ್ಕಾಲರ್ಶಿಪ್ (SSP scholarship 2025) ಜಾರಿ ಮಾಡಿದ್ದು, ಇದರ ಮೂಲಕ ಆರ್ಥಿಕವಾಗಿ ವಿದ್ಯಾರ್ಥಿಗಳ ಮುಂದಿನ ಓದಿಗಾಗಿ ಸರ್ಕಾರವು ಸಹಾಯ ಮಾಡುತ್ತಿತ್ತು. ಈ ಒಂದು ಸ್ಕಾಲರ್ಶಿಪ್ ಅರ್ಜಿಯನ್ನು ಪ್ರತಿವರ್ಷ ಕರೆಯಲಾಗುವುದು ಅದೇ ರೀತಿ ಈ ವರ್ಷವೂ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಕರೆಯಲಾಗಿತ್ತು.

SSP scholarship 2025

ಈ ಒಂದು ಅರ್ಜಿಯ ಕೊನೆಯ ದಿನಾಂಕವಾಗಿ 31/03/2025 ಅನ್ನು ನಿಗದಿಪಡಿಸಲಾಗಿತ್ತು. ಆದರೆ ಕೆಲವೊಂದು ಶೈಕ್ಷಣಿಕ ಸಂಸ್ಥೆಗಳಿಂದ ಹಾಗೂ ವಿದ್ಯಾರ್ಥಿಗಳ ಮೂಲಕ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸುವ ಕುರಿತು ಮನವಿಯನ್ನು ಸಲ್ಲಿಸಲಾಗಿತ್ತು. ಈ ಒಂದು ಮನವಿಗೆ ಮಾನ್ಯ ಹೈಕೋರ್ಟ್ ಮಧ್ಯಂತರ ಆದೇಶದಂತೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅಂದರೆ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು 31/05/2025 ರ ವರೆಗೆ ವಿಸ್ತರಿಸಲಾಗಿದೆ.

ಯಾವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಎಷ್ಟು ವಿದ್ಯಾರ್ಥಿ ವೇತನವನ್ನು ಸಿಗುತ್ತದೆ? SSP scholarship 2025.

ಇದನ್ನು ಮೂಲತಃ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಬೆಂಬಲಕ್ಕಾಗಿ ಜಾರಿ ಮಾಡಲಾಗಿದ್ದು. ಪ್ರಸ್ತುತ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಮೆಟ್ರಿಕ್ ನಂತರದ ಯಾವುದೇ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

SSP_scholarship_2025
SSP scholarship 2025

ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ ಕನಿಷ್ಠ ₹1000 ದಿಂದ ಗರಿಷ್ಠ ₹50000 ರೂಪಾಯಿವರೆಗೆ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ಅವರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಈ ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಗುಣವಾಗಿ ಆರ್ಥಿಕ ನೆರವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು.

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಕಾಲೇಜು ಪ್ರವೇಶ ಪ್ರಮಾಣ ಪತ್ರ
  • ವಸತಿ ನಿಲಯದ ವಿವರಗಳು
  • ಪೋಷಕರ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಅಗತ್ಯ ಅಂಕ ಪಟ್ಟಿಗಳು
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

ಈ ಮಾಹಿತಿಗಳನ್ನು ಓದಿ:

Udyogini Yojana: ಉದ್ಯೋಗಿನಿ ಯೋಜನೆ ಅಡಿಯಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ..! 1.50 ಲಕ್ಷ ಸಬ್ಸಿಡಿ..! Quick Apply.

[inline_join_buttons]

[floating_join_buttons]

Leave a Comment